Home ಟಾಪ್ ಸುದ್ದಿಗಳು ಬೆಂಗಳೂರು: ಸಾಮಾನ್ಯ ನಾಗರಿಕನಂತೆ ಬಸ್’ನಲ್ಲಿ ರಾಹುಲ್ ಗಾಂಧಿ ಸಂಚಾರ

ಬೆಂಗಳೂರು: ಸಾಮಾನ್ಯ ನಾಗರಿಕನಂತೆ ಬಸ್’ನಲ್ಲಿ ರಾಹುಲ್ ಗಾಂಧಿ ಸಂಚಾರ

ಬೆಂಗಳೂರು: ಇಂದು ಸಂಜೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ವಿವಿಧ ಪಕ್ಷದ ನಾಯಕರು ಗೆಲುವು ಸಾಧಿಸಲು ವಿವಿಧ ರೀತಿಯ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಸೋಮವಾರ ಬೆಳಗ್ಗೆ ರಾಹುಲ್ ಗಾಂಧಿ ಅವರು ಬಿಎಂಟಿಸಿ ಬಸ್ ನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.


ಕನ್ನಿಂಗ್ ಹ್ಯಾಮ್ ರಸ್ತೆಯಿಂದ ರಾಮಮೂರ್ತಿ ನಗರ ಕಡೆ ಹೋಗುತ್ತಿದ್ದ ಬಸ್ ನಲ್ಲಿ ರಾಹುಲ್ ಗಾಂಧಿ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುತ್ತಲೇ ಸಾರ್ವಜನಿಕರಂತೆ ಬಸ್ನಲ್ಲಿ ಪ್ರಯಾಣಿಸಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್ ನಲ್ಲೇ ಪ್ರಯಾಣ ಬೆಳೆಸಿದ್ದಾರೆ.

Join Whatsapp
Exit mobile version