ಬೆಂಗಳೂರು ರಾಮೇಶ್ವರಂ ಕೆಫೆ ರೀತಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ: ಸಿಎಂ, ಡಿಸಿಎಂಗೆ ಇ–ಮೇಲ್

Prasthutha|

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ರೀತಿಯಲ್ಲಿ ಮತ್ತಷ್ಟು ಕಡೆ ಬಾಂಬ್ ಸ್ಫೋಟಿಸುತ್ತೇವೆ’ ಎಂಬುದಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಅವರ ಇ–ಮೇಲ್ ಗೆ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ಬಸ್‌ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇತರೆಡೆ ಬಾಂಬ್ ಸ್ಫೋಟಿಸುತ್ತೇವೆ ಎಂಬುದಾಗಿ ಸಂದೇಶದಲ್ಲಿ ಬೆದರಿಸಲಾಗಿದೆ.

ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.



Join Whatsapp