Home ಟಾಪ್ ಸುದ್ದಿಗಳು ಮಗನನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದ ಬೆಂಗಳೂರಿನ ಸ್ಟಾರ್ಟ್ ಅಪ್ ಸಿಇಒ ಬಂಧನ

ಮಗನನ್ನು ಕೊಂದು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದ ಬೆಂಗಳೂರಿನ ಸ್ಟಾರ್ಟ್ ಅಪ್ ಸಿಇಒ ಬಂಧನ

ಚಿತ್ರದುರ್ಗ: ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್ ಕೇಸ್ ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ಮಹಿಳೆಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರಿನ ‘ಮೈಂಡ್ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ (39) ಬಂಧಿತ ಮಹಿಳೆ. ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದು, ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.


ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ವಿರುದ್ಧ ಗೋವಾದ ಹೋಟೆಲ್ ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್ ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು.


ಆಕೆ ಹೋಟೆಲ್ ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದಾರೆ. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Join Whatsapp
Exit mobile version