ಬೆಂಗಳೂರು: ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 3.30 ರ ಸುಮಾರಿಗೆ ಸೆಲ್ವಿನ್ ಪ್ರಾನ್ಸಿಸ್ ಎಂಬಾತ ಪತ್ನಿ ಇಂದುವನ್ನು ಬರ್ಬರವಾಗಿ ಹತ್ಯೆಗೈಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೆಲ್ವಿನ್ ಪ್ರಾನ್ಸಿಸ್ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು. ಹೀಗಾಗಿ ಪತಿಯಿಂದ 6 ತಿಂಗಳ ಹಿಂದೆ ದೂರಾಗಿದ್ದಳು. ವೆಂಕಟಾಪುರದ ತಾಯಿ ಮನೆಯಲ್ಲಿ ವಾಸವಿದ್ದಳು. ಇಂದು ಗುರುವಾರ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಪತ್ನಿ ಜತೆಗೆ ಸೆಲ್ವಿನ್ ಪ್ರಾನ್ಸಿಸ್ ಗಲಾಟೆ ಮಾಡಿಕೊಂಡಿದ್ದ. ಈ ಮೊದಲೇ ಪ್ರಿಪ್ಲಾನ್ ಮಾಡಿಕೊಂಡು ಪತ್ನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.
ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪತಿಯಿಂದ ಇಂದು ದೂರವಾಗಿದ್ದಳು.ಪತ್ನಿ ಜೊತೆ ಜಗಳ ತೆಗೆದು ರಸ್ತೆಯಲ್ಲಿ ಪತಿ ಇರಿದು ಇಂದುವನ್ನು ಕೊಂದಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆ ಕುರಿತಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.