ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Prasthutha|

ಶುಕ್ರವಾರ ಬೆಳಗ್ಗೆ ಬೆಂಗಳೂರು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಮೂವರು ಸಾಲಬಾಧೆ ತಾಳಲಾರದೆ ಮನೆಯಲ್ಲಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

- Advertisement -


ಆತ್ಮಹತ್ಯೆಗೆ ಶರಣಾದ ಸಂತೋಷ್ (60), ಇವರ ಪತ್ನಿ ಒಮನಾ(55), ಮಗಳು ಅನುಷಾ (18) ಈ ಮೂವರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.


ಸಂತೋಷ್ ರವರು ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಯಂತ್ರಗಳ ಬಿಡಿ ಭಾಗಗಳ ಕಾರ್ಖಾನೆ ನಡೆಸುತ್ತಿದ್ದರು. ಇವರು ಕೇರಳ ಮೂಲದವರಾಗಿದ್ದು 20 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಈಗ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದಾರೆ. ಅ.21ರ ಬೆಳಗ್ಗೆ ಕುಟುಂಬದ ಮೂವರು ಮನೆಯ ಬಾಗಿಲ ಚಿಲಕವನ್ನು ಹಾಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದಾವಿಸಿ ಬಾಗಿಲು ಒಡೆದು ನೋಡಿದಾಗ ಮನೆಯೊಳಗಿದ್ದ ಮೂವರು ಮರಣ ಹೊಂದಿರುವುದು ಕಂಡು ಬಂದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



Join Whatsapp