Home ಟಾಪ್ ಸುದ್ದಿಗಳು ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತ್ಯು

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮೃತ್ಯು

ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಿಯಪ್ಪ, (70) ಮುನಿಯಮ್ಮ,(60) ಭಾರತಿ (40) ಮೃತರು.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೂವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.

ಜಮೀನಲ್ಲಿದ್ದ ಕೃಷಿ ಹೊಂಡದಲ್ಲಿ ಬುದ್ಧಿಮಾಂದ್ಯಳಾಗಿದ್ದ ಮಗಳು ಭಾರತಿ ಕೈ ತೊಳೆಯಲು ಹೋದವಳು ಬಿದ್ದಿದ್ದಾಳೆ. ಬಳಿಕ ಮಗಳ ರಕ್ಷಣೆ ಮಾಡಲು ಹೋಗಿ ಮುನಿಯಮ್ಮ ಮತ್ತು ಮರಿಯಪ್ಪ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version