ಸೋಮವಾರದಿಂದ ಬೆಂಗಳೂರು – ಕಾರವಾರ ಹಗಲು ರೈಲು ಸಂಚಾರ ಪುನಾರಂಭ

Prasthutha: August 14, 2021

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ಯಶವಂತಪುರ– ಕಾರವಾರ-ಯಶವಂತಪುರ ಹಗಲು ರೈಲು ಸಂಚಾರವನ್ನು ಆಗಸ್ಟ್ 16ರಿಂದ ಪುನಾರಂಭಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.


ಈ ಕುರಿತಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಕೊರೋನಾ ಕಾರಣದಿಂದಾಗಿ ಈ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ರೈಲು ಸಂಚಾರವನ್ನು ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಗಿತ್ತು. ಇದೀಗ ಆಗಸ್ಟ್ 16ರಿಂದ ರೈಲು ಸಂಚಾರಕ್ಕೆ ಅನುಮತಿಸಲಾಗಿದೆ ಎಂದರು.

ಈ ರೈಲು ಬೆಂಗಳೂರು-ಕಾರವಾರ ನಡುವೆ ವಾರದಲ್ಲಿ ಮೂರು ದಿನಗಳಲ್ಲಿ ಸಂಚರಿಸಲಿದೆ. 06211 ಸಂಖ್ಯೆಯ ರೈಲು ಸೋಮವಾರದಿಂದ ಹಾಗೂ 06212 ಸಂಖ್ಯೆಯ ರೈಲು ಮಂಗಳವಾರದಿಂದ ಆರಂಭಗೊಳ್ಳಲಿದೆ ಎಂದು ಇಲಾಖೆ ತಿಳಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!