Home ಟಾಪ್ ಸುದ್ದಿಗಳು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಬೆಂಗಳೂರು ನಗರ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಕ್ರಮವಾಗಿ 0.538, 0.539 ಹಾಗೂ 0.562 ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿವೆ. ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದರು.


14 ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713ರಿಂದ ಶೇ. 3.647 ಕ್ಕೆ 15 ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ. ರಾಜ್ಯಗಳ ಪೈಕಿ ಕರ್ನಾಟಕ ಕ್ಕೆ ಅತ್ಯಂತ ದೊಡ್ಡ ಮೊತ್ತ ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದರು.

Join Whatsapp
Exit mobile version