Home ಟಾಪ್ ಸುದ್ದಿಗಳು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ

ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ

ಚಿಕ್ಕಮಗಳೂರು: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ.

ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ನಾಪತ್ತೆಯಾದ ಯುವಕನನ್ನು ಭರತ್ ಎಂದು ಗುರುತಿಸಲಾಗಿದೆ.

ವೀಕೆಂಡ್ ಹಿನ್ನೆಲೆ ಭರತ್ ಬೆಂಗಳೂರಿನಿಂದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ಗೆ ಟ್ರಕ್ಕಿಂಗ್ ಎಂದು ಬಂದಿದ್ದು ನಾಪತ್ತೆಯಾಗಿದ್ದಾನೆ. ಸದ್ಯ ಯುವಕನಿಗಾಗಿ ಅರಣ್ಯ ಇಲಾಖೆ ಶೋಧ ನಡೆಸುತ್ತಿದ್ದಾರೆ.

Join Whatsapp
Exit mobile version