ಬೆಂಗಳೂರು ಯುವಕನ ಕಿಡ್ನಾಪ್, ಕೊಲೆ ಪ್ರಕರಣ; ಇಬ್ಬರು ಪ್ರಮುಖ ಆರೋಪಿಗಳಿಗೆ ನ್ಯಾಯಾಂಗ ಬಂಧನ

Prasthutha|

ಚಿಕ್ಕಮಗಳೂರು : ಸುಮಾರು ಒಂಬತ್ತು ತಿಂಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಕೊಲೆಯಾದ ಯುವಕ ಶರತ್ ಶವವನ್ನು ಇನೋವಾ ಕಾರಿನಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ ನೇತೃತ್ವದಲ್ಲಿ ಶವ ಪತ್ತೆಹಚ್ಚುವ ಕಾರ್ಯಾಚರಣೆ ನಡೆಸಲಾಗಿತ್ತು.

- Advertisement -

ಮೂರು ದಿನಗಳ ಕಾರ್ಯಾಚರಣೆಯಲ್ಲಿ ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಅಗಿದ್ದ ಪೊಲೀಸರು  ಇಬ್ಬರು ಪ್ರಮುಖ ಆರೋಪಿಗಳನ್ನು ಜ.9 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Join Whatsapp