ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಕಂದಾಯ ಅಧಿಕಾರಿಗಳು ಈಗ ಮಾಲ್ ಅನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.