ಲಂಚ ಸ್ವೀಕರಿಸುವಾಗ ಬೆಸ್ಕಾಂ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Prasthutha|

ಬೆಂಗಳೂರು: 30 ಸಾವಿರ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಸಹಾಯಕ ಇಂಜಿನಿಯರ್​ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.

- Advertisement -

ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್​ ರಾಜೇಶ್ ಎಂದು ಗುರುತಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ರಾಜೇಶ್ ವಿರುದ್ಧ FIR​ ಕೂಡ ದಾಖಲು ಮಾಡಲಾಗಿದೆ.

ಬೆಂಗಳೂರಿನ ಕೊತನೂರು ಬೆಸ್ಕಾಂ ಸಹಾಯಕ ಇಂಜಿನಿಯರ್ ರಾಜೇಶ್​ ಕಚೇರಿಯಲ್ಲಿ 2 ಲಕ್ಷ ರೂ. ಹೆಚ್ಚುವರಿ ನಗದು ಕೂಡ ಪತ್ತೆ ಆಗಿದೆ. ಸದ್ಯ ರಾಜೇಶ್​ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.



Join Whatsapp