ಬೆಂಗಳೂರು: ಬೆಂಗಳೂರು ನಗರದ ವೈಟ್ಫೀಲ್ಡ್ ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನಿನ್ನೆ ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಮೃತಪಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ.
ನಿರ್ಲಕ್ಷ್ಯದ ಆರೋಪದ ಮೇಲೆ ಬೆಸ್ಕಾಂ ಎಇ ಚೇತನ್, ಜೆಇ ರಾಜಣ್ಣ, ಸ್ಟೇಷನ್ ಆಪರೇಟರ್ ಮಂಜು ಸೇರಿದಂತೆ ಐವರನ್ನು ಕಾಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ, ಇದೀಗ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.