ಮಂಗಳೂರು : ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್ ಎಂದು ಮಾಜಿ ಸಚಿವ ರಮನಾಥ ರೈ ಬಣ್ಣಿಸಿದ್ದಾರೆ.
ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್ ಎಂದಿರುವ ಅವರು ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ, ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಆಗಿದ್ದು, ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆ, ಪ್ರದೇಶ, ಜಿಲ್ಲೆ ಹಾಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ಕೊಟ್ಟಿದ್ದು, ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಯೋಜನೆಗಳನ್ನು ನೀಡಲಾಗಿದೆ, ಅದಕ್ಕಾಗಿ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ.