Home ಟಾಪ್ ಸುದ್ದಿಗಳು ಬೆಟ್ಟಿಂಗ್‌ ಆ್ಯಪ್ ಹಗರಣ: ಪ್ರಣೀತಾ, ಪ್ರಕಾಶ್‌ ರಾಜ್‌, ದೇವರಕೊಂಡ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ED...

ಬೆಟ್ಟಿಂಗ್‌ ಆ್ಯಪ್ ಹಗರಣ: ಪ್ರಣೀತಾ, ಪ್ರಕಾಶ್‌ ರಾಜ್‌, ದೇವರಕೊಂಡ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ED ಕೇಸ್‌

0

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಟಿ ಪ್ರಣೀತಾ ಸುಭಾಷ್‌, ಬಹುಭಾಷಾ ನಟ ಪ್ರಕಾಶ್‌ ರಾಜ್‌, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ.

ನಟ, ನಟಿಯರ ಜೊತೆಗೆ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯನ್ಸರ್, ಯುಟ್ಯೂಬರ್‌ಗಳ ವಿರುದ್ಧವೂ ಇಡಿ ಗುರುವಾರ ಪ್ರಕರಣ ದಾಖಲಿಸಿದೆ.

5 ರಾಜ್ಯಗಳ ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ. ಇದರಲ್ಲಿ ಆರೋಪಿತರು ಬೆಟ್ಟಿಂಗ್ ಮತ್ತಿತರ ಜೂಜುಗಳ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿದ್ದರು ಎಂದು ಆರೋಪಿಸಲಾಗಿದೆ.

ED ದಾಖಲಿಸಿಕೊಂಡಿರುವ ದೂರಿನಲ್ಲಿ ಮೂವರು ಸ್ಟಾರ್‌ ನಟರೊಂದಿಗೆ 29 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣಿತಾ ಸುಭಾಷ್, ನಿಧಿ ಅಗರ್ವಾಲ್, ಅನನ್ಯ ನಾಗಲ್ಲ, ಸಿರಿ ಹನುಮಂತ್, ಶ್ರೀಮುಖಿ, ವರ್ಷಿಣಿ ಸೌಂದರರಾಜನ್, ವಸಂತಿ ಕೃಷ್ಣನ್, ಶೋಭಾ ಶೆಟ್ಟಿ, ಅಮೃತಾ ಚೌಧರಿ, ನಯನಿ ಪಾವನಿ, ನೇಹಾ ಪಠಾಣ್, ಪಾಂಡು, ಪದ್ಮಾವತಿ, ಇಮ್ರಾನ್ ಖಾನ್, ವಿಷ್ಣು ಪ್ರಿಯಾ, ಹರ್ಷ ಸಾಯಿ, ಭಯ್ಯಾ ಸನ್ನಿ ಯಾದವ್, ಶ್ಯಾಮಲಾ, ಟೇಸ್ಟಿ ತೇಜಾ, ರೀತು ಚೌಧರಿ, ಬಂದಾರು ಶೇಷಾಯನಿ ಸುಪ್ರೀತ, ಬೆಟ್ಟಿಂಗ್ ವೇದಿಕೆಗಳ ನಿರ್ವಾಹಕರು, ಕಿರಣ್ ಗೌಡ್, ಸೋಷಿಯಲ್‌ ಮೀಡಿಯಾ ಸ್ಟಾರ್‌ ಅಜಯ್, ಸನ್ನಿ ಮತ್ತು ಸುಧೀರ್‌ ಹಾಗೂ ‘ಲೋಕಲ್ ಬಾಯ್ ನಾನಿ’ ಯೂಟ್ಯೂಬ್ ಚಾನೆಲ್‌ ವಿರುದ್ಧ ಕೇಸ್‌ ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version