Home ಕರಾವಳಿ ಮಂಗಳೂರು | ವಿದ್ಯಾರ್ಥಿಗಳ ನಡುವೆ ಗಲಾಟೆ: 16 ಮಂದಿ ವಿರುದ್ಧ ಪ್ರಕರಣ

ಮಂಗಳೂರು | ವಿದ್ಯಾರ್ಥಿಗಳ ನಡುವೆ ಗಲಾಟೆ: 16 ಮಂದಿ ವಿರುದ್ಧ ಪ್ರಕರಣ

ಮಂಗಳೂರು: ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಗುರುವಾರ ರಾತ್ರಿ ಮಾರಾಮಾರಿ ನಡೆದಿದ್ದು, ಒಟ್ಟು 16 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.


ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ವಿದ್ಯಾರ್ಥಿಗಳು ನಗರದ ಯೆನಪೋಯಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಗುಂಪೊಂದು ವಿದ್ಯಾರ್ಥಿಯ ಮೇಲೆ ಹೆಲ್ಮೆಟ್ ಮತ್ತು ಕಲ್ಲುಗಳಿಂದ ಹಲ್ಲೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಮತ್ತೊಂದು ತಂಡ ಕೂಡ ಹಲ್ಲೆ ನಡೆಸಿದೆ.


ಎರಡೂ ಕಡೆಗಳಿಂದ ಘರ್ಷಣೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಲಾಗಿದೆ. ನಮ್ಮ ಪೊಲೀಸ್ ತಂಡವು ಹಾಸ್ಟೆಲ್ ನಲ್ಲಿ ಕೆಲವು ಆರೋಪಿಗಳನ್ನು ಬಂಧಿಸಲು ಹೋದಾಗ, ಹುಡುಗರು ಕಲ್ಲು, ಇಂಟರ್ ಲಾಕ್ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version