Home ಟಾಪ್ ಸುದ್ದಿಗಳು ಹುಷಾರ್.. ಇದು ಮಂಗಳೂರು ಅಲ್ಲ ಮಂಡ್ಯ: ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ವಾರ್ನಿಂಗ್

ಹುಷಾರ್.. ಇದು ಮಂಗಳೂರು ಅಲ್ಲ ಮಂಡ್ಯ: ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ವಾರ್ನಿಂಗ್

ಮಂಡ್ಯ: ಮಂಡ್ಯ ಜಿಲ್ಲೆಯ ಜನರು ನಿಮ್ಮ ಗಿಮಿಕ್ ಅನ್ನು ನಂಬುವುದಿಲ್ಲ. ಅದೇ ರೀತಿ ನಿಮ್ಮನ್ನು ಕ್ಷಮಿಸುವುದೂ ಇಲ್ಲ. ಇದು ಮಂಗಳೂರು ಅಲ್ಲ ಮಂಡ್ಯ ಎಂದು ಬಿಜೆಪಿಗೆ ಸಚಿವ ಚಲುವರಾಯಸ್ವಾಮಿ ವಾರ್ನಿಂಗ್ ನೀಡಿದ್ದಾರೆ.


ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವು (ಕುಮಾರಸ್ವಾಮಿ) ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ ಎಂಬುದನ್ನು ಮರೆಯಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ಕುಮಾರಸ್ವಾಮಿ ಅವರನ್ನುದ್ದೇಶಿಸಿ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.


ಸಿಟಿ ರವಿಯವರೇ, ನೀವು ಹೋರಾಟ ಮಾಡಿ. ಬೇಡ ಎನ್ನುತ್ತಿಲ್ಲ. ಆದರೆ ಪ್ರಜಾಪ್ರಭುತ್ವದ ವಿಚಾರದಲ್ಲಿ ಜನರನ್ನು ಹಾದಿತಪ್ಪಿಸುವ ಕೆಲಸ ಮಾಡಬೇಡಿ ಎಂದು ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. ಆರ್ ಅಶೋಕ ಅವರು ಪ್ರತಿಪಕ್ಷ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಘನತೆಯಿಂದ ವರ್ತಿಸಬೇಕಿತ್ತು. ಆದರೆ, ಅವರು ಕ್ಷುಲ್ಲಕ ರಾಜಕಾರಣ ಮಾಡಲು ಮಂಡ್ಯಕ್ಕೆ ಸೋಮವಾರ ಬಂದಿದ್ದರು ಎಂದು ಚಲುವರಾಯಸ್ವಾಮಿ ಟೀಕಿಸಿದರು.

Join Whatsapp
Exit mobile version