ಭದ್ರಾವತಿ: ಬಜರಂಗದಳದ ಪ್ರತಿಭಟನೆಯ ವೇಳೆ ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ

Prasthutha|

ಶಿವಮೊಗ್ಗ: ಉದಯಪುರ ಹತ್ಯೆ ಖಂಡಿಸಿ ಭದ್ರಾವತಿಯಲ್ಲಿ ಭಾನುವಾರ ಬಜರಂಗ ದಳ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮ್ ಅಂಗಡಿಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಘಟನೆ ನಡೆದಿದೆ.

- Advertisement -

ಭದ್ರಾವತಿಯ ರಂಗಪ್ಪ ವೃತ್ತದಲ್ಲಿ ಭಾನುವಾರ ಪ್ರತಿಭಟನೆಯ ವೇಳೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಒಡೆದುಹಾಕಿದ್ದಾರೆ.

ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ಸ್ಥಳದಲ್ಲಿದ್ದ ಮುಸ್ಲಿಮರ ಅಂಗಡಿಯ ಗ್ಲಾಜುಗಳನ್ನು ಒಡೆಯಲಾಗಿದೆ.  ಶೌಕತ್ ಎಂಬವರ ಅಂಗಡಿ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಕೂಡ ನಡೆದಿದ್ದು, ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

- Advertisement -

ಘಟನೆಯ ಬಗ್ಗೆ ಮುಸ್ಲಿಮ್ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

ಸ್ಥಳೀಯ ಜವಳಿ ಅಂಗಡಿಗೆ ನುಗ್ಗಿ ಪೊಲೀಸರ ಸಮ್ಮುಖದಲ್ಲೇ ಅಂಗಡಿ ಮಾಲೀಕನಿಗೆ ಹಲ್ಲೆ ನಡಸಿ ಕಲ್ಲೂ ತೂರಾಟ ಮಾಡಿದ್ದರೂ ಅಂಗಡಿ ಮಾಲೀಕನನ್ನು ಪೊಲೀಸರು ಎಳೆದುಕೊಂಡು ಹೋಗಿರುವುದು ಖಂಡನೀಯ ಎಂದು ಟ್ವೀಟ್ ಮೂಲಕ ಎಸ್ ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ.

ಪ್ರತಿಭಟನೆಯ ವೇಳೆ ಭಾಷಣಕಾರರು ಉದ್ರೇಕಕಾರಿಯಾಗಿ ಭಾಷಣ ಮಾಡಿದ್ದಾರೆ. ಅವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp