ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಿದ ಮೋದಿ ಸರ್ಕಾರ

Prasthutha|

ನವದೆಹಲಿ: 105 ವರ್ಷಗಳ ಇತಿಹಾಸವಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

- Advertisement -

ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಿ, ವಿಐಎಸ್’ಎಲ್ ಮುಚ್ಚುವುದಾಗಿ ತಿಳಿಸಿದೆ.

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಮೋದಿ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಟ್ವೀಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

‘ಇಂದು ರಾಜ್ಯಸಭೆಯಲ್ಲಿ ಸರ್ಕಾರ, ಭದ್ರಾವತಿಯ ವಿಐಎಸ್’ಎಲ್ ಅನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಹೇಳಿದೆ. ಕಾರ್ಖಾನೆ ಕಬ್ಬಿಣದ ಅದಿರಿನ ಮೂಲ ಇಲ್ಲ ಎಂಬ ಕಾರಣವನ್ನು ನೀಡಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ, ವಿಎಸ್’ಐಎಲ್’ಗೆ ಗಣಿಗಳಿಲ್ಲ ಎಂಬುದು ಆಶ್ಚರ್ಯ. ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ. ವಿಐಎಸ್’ಎಲ್’ಗೆ ಗಣಿ ಪರವಾನಗಿಯನ್ನು 2011ರಲ್ಲಿ ನೀಡಿದರೂ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲ’ ಎಂದು ಜೈರಾಂ ರಮೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬಸವರಾಜ ಬೊಮ್ಮಾಯಿ ಮೂರು ದಿನಗಳ ಹಿಂದೆ ಕಾರ್ಖಾನೆಗೆ ಭೇಟಿ ನೀಡಿ ಪ್ರತಿಭಟನಾನಿರತ ವಿಐಎಸ್’ಎಲ್’ ಕಾರ್ಮಿಕರಿಗೆ ಕಾರ್ಖಾನೆ ಉಳಿಸುವ ಭರವಸೆ ನೀಡಿದ್ದರು.

Join Whatsapp