Home ಕರಾವಳಿ ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಮಂಗಳೂರು: ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸುತ್ತೇವೆ ಎಂದು ತುಳು ಭಾಷೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮಾಡಿದ್ದ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೆ.ಎಸ್. ಈಶ್ವರಪ್ಪ ಈ ಹೇಳಿಕೆ ನೀಡಿದರು ಎಂದು ಕಾಂಗ್ರೆಸ್ ನವರು ಅಧಿವೇಶನ ಮೊಟಕುಗೊಳಿಸಿದ್ದಾರೆ. ಆದರೆ ನಾವು ಕೆಂಪುಕೋಟೆಯ ಮೇಲೆ ಭಗವಾಧ್ವಜ ಹಾರಿಸೋದು ಸಿದ್ದ. ರಾಷ್ಟ್ರಧ್ವಜದ ಕೆಳಗೆ ಭಗವಾಧ್ವಜವನ್ನು ಹಾರಿಸುತ್ತೇವೆ. ಭಗವಾಧ್ವಜ ಹಾರಿಸೋದನ್ನು ಯಾರಿಂದಲೂ ತಪ್ಪಿಸಲಾಗಲ್ಲ ಎಂದು ಹೇಳಿಕೆ ನೀಡಿದ್ದಾರೆ.

Join Whatsapp
Exit mobile version