ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

Prasthutha|

ಸುರಪುರ : ರಾಜ್ಯದಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆಗೆ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡರು. ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದ ಹೆಲಿಪ್ಯಾಡ್ ಬಳಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗುಜರಾತಿನಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗಿದ್ದು, ಇದರಿಂದ ಮಕ್ಕಳಲ್ಲಿ ನೈತಿಕತೆ ಬೆಳೆಯಲಿದೆ ಎಂದು ಹೇಳಿದರು.

- Advertisement -

ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಗುಜರಾತ್ ರಾಜ್ಯದಲ್ಲಿ ಆಗಿದೆ. ಭಗವದ್ಗೀತೆ ಅಳವಡಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ನೈತಿಕತೆ ಬೆಳೆಸುವುದು ಅಗತ್ಯವಿದೆ. ಹೀಗಾಗಿಯೇ ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಮೂಡಿಸಬಾರದು ಎಂದರು.

ಇನ್ನು ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೇ ಬೌದ್ಧಿಕ ಮಟ್ಟ ಸುಧಾರಣೆ ಆಗುತ್ತದೆ. ಇದರಲ್ಲಿ ತಪ್ಪು ಏನಿದೆ. ನಮ್ಮಲ್ಲಿಯೂ ಅಳವಡಿಕೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆ ನಿಟ್ಟಿಯಲ್ಲಿ ಸರ್ಕಾರ ಸೂಕ್ತವಾದ ಹೆಜ್ಜೆ ಇಡಲಿದೆ ಎಂದು ತಿಳಿಸಿದರು.

Join Whatsapp