Home ಟಾಪ್ ಸುದ್ದಿಗಳು ಶಾಲಾ ಮಕ್ಕಳಿಗೆ ಭಗವದ್ಗೀತೆ: ಪೂರಕ ಪಠ್ಯ ಬಿಡುಗಡೆ

ಶಾಲಾ ಮಕ್ಕಳಿಗೆ ಭಗವದ್ಗೀತೆ: ಪೂರಕ ಪಠ್ಯ ಬಿಡುಗಡೆ

ಗುಜರಾತ್: ಗುಜರಾತ್ ಸರಕಾರವು ಶಾಲಾ ಮಕ್ಕಳಿಗೆ ಭಗವದ್ಗೀತೆ ಕಲಿಸಲು ತೀರ್ಮಾನಿಸಿದ್ದು, ಪೂರಕ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ವರ್ಷದಿಂದಲೇ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪಠ್ಯವಾಗಲಿದೆ.

ಗೀತಾ ಜಯಂತಿಯಂದು ಈ ಘೋಷಣೆ ಮಾಡಲಾಗಿದ್ದು, ಗುಜರಾತ್‌ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಆಧ್ಯಾತ್ಮಿಕ ತತ್ವಗಳನ್ನು ಪೂರಕ ಪಠ್ಯಪುಸ್ತಕದ ಮೂಲಕ ಬೋಧನಾ ಕಾರ್ಯ ನಡೆಯಲಿದೆ ಎಂದು ಸರಕಾರ ತಿಳಿಸಿದೆ.

ಗುಜರಾತ್‌ನ ಶಿಕ್ಷಣ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಈ ಕುರಿತು ಮಾಹಿತಿ ನೀಡಿದ್ದು, 6ರಿಂದ 8ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆಯಿಂದ ಆಯ್ದ ಆಧ್ಯಾತ್ಮಿಕ ತತ್ವಗಳು ಮತ್ತು ಮೌಲ್ಯಗಳನ್ನು ಪೂರಕ ಪಠ್ಯಪುಸ್ತಕವಾಗಿ ಸೇರಿಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರವು 3 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದಾರೆ.

Join Whatsapp
Exit mobile version