Home ಟಾಪ್ ಸುದ್ದಿಗಳು NEP ಗೆ ಅನುಗುಣವಾಗಿ 6-12ನೇ ತರಗತಿ ಮಕ್ಕಳಿಗೆ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ!

NEP ಗೆ ಅನುಗುಣವಾಗಿ 6-12ನೇ ತರಗತಿ ಮಕ್ಕಳಿಗೆ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ!

ಅಹ್ಮದಾಬಾದ್ : 2022-23ರ ಶೈಕ್ಷಣಿಕ ವರ್ಷದಿಂದ ರಾಜ್ಯದಾದ್ಯಂತ 6 ರಿಂದ 12ನೇ ತರಗತಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಭಾಗವಾಗಲಿದೆ ಎಂದು ಗುಜರಾತ್ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಘೋಷಿಸಿದೆ.

ಗುಜರಾತ್ ಶಿಕ್ಷಣ ಸಚಿವರಾಗಿರುವ ವಘಾನಿ ಅವರು ಈ ನಿರ್ಧಾರವು ಕೇಂದ್ರವು ಅನಾವರಣಗೊಳಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿದೆ. ಇದು ಆಧುನಿಕ ಮತ್ತು ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಜ್ಞಾನ ವ್ಯವಸ್ಥೆಗಳನ್ನ ಪರಿಚಯಿಸುವುದನ್ನು ಪ್ರತಿಪಾದಿಸುತ್ತದೆ, ಇದರಿಂದ ವಿದ್ಯಾರ್ಥಿಗಳು ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುತ್ತಾರೆ ಎಂದು ಸಚಿವರು ಹೇಳಿದರು.

ಮಾದ್ಯಮದವರೊಂದಿಗೆ ಮಾತನಾಡಿದ ವಘಾನಿ, ಪ್ರಾಚೀನ ಹಿಂದೂ ಧರ್ಮಗ್ರಂಥದಲ್ಲಿ ವಿವರಿಸಲಾದ ನೈತಿಕ ಮೌಲ್ಯಗಳು ಮತ್ತು ತತ್ವಗಳನ್ನ ಎಲ್ಲಾ ಧರ್ಮಗಳ ಜನರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ‘ಆದ್ದರಿಂದ, ನಾವು 6 ರಿಂದ 12ನೇ ತರಗತಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನ ಪರಿಚಯಿಸಲು ನಿರ್ಧರಿಸಿದ್ದೇವೆ. 6 ರಿಂದ 8 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ಪಠ್ಯಪುಸ್ತಕದಲ್ಲಿ ಧರ್ಮಗ್ರಂಥವನ್ನ ಪರಿಚಯಿಸಲಾಗುವುದು. 9ರಿಂದ 12ನೇ ತರಗತಿಗಳವರೆಗೆ ಪ್ರಥಮ ಭಾಷೆಯ ಪಠ್ಯಪುಸ್ತಕದಲ್ಲಿ ಕಥೆ ಹೇಳುವ ರೂಪದಲ್ಲಿ ಪರಿಚಯಿಸಲಾಗುವುದು’ ಎಂದು ಅವರು ಹೇಳಿದರು.

Join Whatsapp
Exit mobile version