ಬೆಂಗಳೂರು: ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ಮಾರಲ್ ಸೈನ್ಸ್ ವಿಷಯಗಳು ಇವತ್ತು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.