ನವದೆಹಲಿ: ನಿರೀಕ್ಷೆಯಂತೆ ಪಂಜಾಬ್ ವಿಧಾನಸಭೆ ಚುನಾವಣೆಗೆ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಭಗವಂತ್ ಮನ್ನ್ ಅವರ ಹೆಸರನ್ನು ಪ್ರಕಟಿಸಲಾಗಿದೆ.
ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಆಮ್ ಆದ್ಮಿ ಫೋನ್ ಓಟಿಂಗ್ನ ಮೊರೆ ಹೋಗಿತ್ತು. ಎಸ್ಎಸ್ಎಸ್, ವಾಟ್ಸ್ಆ್ಯಪ್ ಅಥವಾ ಮಿಸ್ಡ್ ಕಾಲ್ ಮೂಲಕ ನಿಮ್ಮ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ನೀವೇ ಆಯ್ಕೆ ಮಾಡಿ ಎಂದು ಆಪ್ ಸಾರ್ವಜನಿಕರಿಗೆ ಮನವಿ ಮಾಡಿತ್ತು.
ಫೋನ್ ಓಟಿಂಗ್ನಲ್ಲಿ ಅತೀ ಹೆಚ್ಚು ಮತ ಪಡೆದ ವ್ಯಕ್ತಿಯನ್ನು ಪಂಜಾಬ್ ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದರು. ಅದರಂತೆ ಅತಿ ಹೆಚ್ಚಿನ ಮತಗಳನ್ನು ಪಡೆದ ಭಗವಂತ್ ಮನ್ನ್ ಅವರನ್ನು ಮಂಗಳವಾರ ಸಿಎಂ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.