ನವದೆಹಲಿ: ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು. ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಮೂವರೂ ಶುಕ್ರವಾರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.