ಅಗ್ನಿಪಥ್ ಯೋಜನೆ ವಿರೋಧಿಸಿ ಭಾರತ್ ಬಂದ್: ರೈಲುಗಳ ಸಂಚಾರ ರದ್ದು, ದೇಶದೆಲ್ಲೆಡೆ ಬಿಗಿ ಬಂದೋಬಸ್ತ್

Prasthutha|

ನವದೆಹಲಿ: ಕಳೆದ ವಾರ ಕೇಂದ್ರ ಸರ್ಕಾರ ಅನಾವರಣಗೊಳಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಕೆಲವು ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿದ್ದರಿಂದ ದೆಹಲಿಯಲ್ಲಿ ಸೋಮವಾರ 80 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಹಲವು ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ‘ಅಗ್ನಿಪಥ್’ ಯೋಜನೆಯನ್ನು ಹಿಂಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲು ಸೇನಾ ಉದ್ಯೋಗಾಗಾಂಕ್ಷಿಗಳು ಮುಂದಾಗಿದ್ದಾರೆ.

- Advertisement -

ಕೇಂದ್ರದ ಹೊಸ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆಗಳ ನಡುವೆ ಸೋಮವಾರ ಹಲವಾರು ರಾಜ್ಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕಳೆದ ವಾರ ಕೇಂದ್ರದ ನಿರ್ಧಾರದ ವಿರುದ್ಧ ಸಾವಿರಾರು ಜನರು ಪ್ರತಿಭಟಿಸಿದಾಗ ವ್ಯಾಪಕ ಹಿಂಸಾಚಾರ ಸಂಭವಿಸಿದ್ದರಿಂದ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಇತರ ರಾಜ್ಯಗಳು ಸೇರಿದಂತೆ ಭದ್ರತೆಯನ್ನು ಹೆಚ್ಚಿಸಿವೆ .

- Advertisement -

ಪಂಜಾಬ್ ಸರಕಾರವು ಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ಸರಕಾರಿ ಕಚೇರಿಗಳು, ಸೇನಾ ನೇಮಕಾತಿ ಕೇಂದ್ರಗಳು ಹಾಗೂ ಬಿಜೆಪಿ ಮತ್ತು ಹಿಂದೂ ನಾಯಕರಿಗೆ ಸಂಬಂಧಿಸಿದ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

 ಕರ್ನಾಟಕದ ಬೆಳಗಾವಿಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅದೇ ರೀತಿ ದೆಹಲಿಯಲ್ಲೂ ಕಾಂಗ್ರೆಸ್ ಧರಣಿ ಹಮ್ಮಿಕೊಂಡಿರುವುದರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

Join Whatsapp