ಸೆ. 27 ಕ್ಕೆ ಭಾರತ್ ಬಂದ್ : 112 ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ

Prasthutha|

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆ. 27 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಭಾರತ್ ಬಂದ್ ಗೆ ದೇಶಾದ್ಯಂತ 112 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆ. 27 ಕ್ಕೆ ಕರೆ ನೀಡಿರುವ ಭಾರತ್ ಬಂದ್ ಗೆ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಸೇರಿದಂತೆ 112 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ.

- Advertisement -

ಇನ್ನು ಕರ್ನಾಟಕದಲ್ಲೂ ಸೆ. 27 ಕ್ಕೆ ಭಾರತ್ ಬಂದ್ ಗೆ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ದೆಹಲಿಯಲ್ಲಿ ಕಳೆದ 10 ತಿಂಗಳಿನಿಂದ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದನ್ನು ಹಿಮ್ಮೆಟ್ಟಿಸಲು ಕೇಂದ್ರ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗಿಸುತ್ತಿದೆ. ರೈತರನ್ನು ಕರೆದು ಮಾತನಾಡುವ ತಾಕತ್ತಿಲ್ಲದ ಸರ್ಕಾರ ವಾಮ ಮಾರ್ಗ ಹಿಡಿದು ರೈತರನ್ನು ಹತ್ತಿಕ್ಕುತ್ತಿದೆ ಎಂದು ಟೀಕಿಸಿದ್ದಾರೆ.

- Advertisement -