ಭಾರತ ಬಂದ್ ಗೆ ಬೆಂಬಲ | ಮಂಗಳೂರಿನಲ್ಲಿ ರಸ್ತೆ ತಡೆ ಪ್ರತಿಭಟನೆ

Prasthutha|

ಮಂಗಳೂರು : ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ರೈತರ ಪ್ರತಿಭಟನೆ ಮುಗಿಲು ಮುಟ್ಟಿರುವ ನಡುವೆ, ನಗರದ ನಂತೂರು ಸರ್ಕಲ್ ನಲ್ಲಿ ಇಂದು ವಾಹನಗಳನ್ನು ತಡೆದು ಪ್ರತಿಭಟನೆ ನಡೆದಿದೆ. ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಇದೇ ವೇಳೆ ಮಾತನಾಡಿದ ರೈತ ಸಂಘಟನೆ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡಿಸ್, ದಪ್ಪ ಚರ್ಮದ ರಾಜಕಾರಣಿಗಳಿಗೆ ರೈತರ ಸಂಕಟ, ನೋವು ಅರ್ಥವಾಗದ ಕಾರಣ ಅನ್ನ ನೀಡುವ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಯಾದವ ಶೆಟ್ಟಿ, ಮನೋಹರ ಶೆಟ್ಟಿ, ಮಾಜಿ ಶಾಸಕ ಐವನ್ ಡಿಸೋಜಾ, ಜೆಡಿಎಸ್ ಮುಖಂಡ ಎಂ.ಬಿ. ಸದಾಶಿವ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮೊಯ್ದಿಬ್ ಬಾವಾ, ಕೃಷ್ಣಪ್ಪ ಸಾಲ್ಯಾನ್, ಅಶ್ವಿನ್ ಮಿನೇಜಸ್, ಸನ್ನಿ ಡಿಸೋಜಾ, ಲಿಯೋ ನಝರತ್, ಶ್ರೀಧರ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಭಾರತಿ ಬೋಳಾರ, ಪ್ರಮೀಳಾ ದೇವಾಡಿಗ, ಅಶುಂತ, ಪುನೀತ್ ಶೆಟ್ಟಿ, ಜಯಂತಿ ಶೆಟ್ಟಿ, ವಿದ್ಯಾ ದಿನಕರ್, ಬಿ.ಕೆ. ಇಮ್ತಿಯಾಝ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

- Advertisement -