ಭಾರತ್ ಬಂದ್| ಹಾಸನದಲ್ಲಿ SDPI ಸೇರಿ ಹಲವು ಸಂಘಟನೆಗಳಿಂದ ಪ್ರತಿಭಟನೆ

Prasthutha|

ಹಾಸನ: ಸಂಯುಕ್ತ ಕಿಸಾನ್ ಮೊರ್ಚಾ ಕರೆ ಕೊಟ್ಟ ಭಾರತ್ ಬಂದ್ ಗೆ ಬೆಂಬಲ ಘೋಷಿಸಿ ಹಾಸನದಲ್ಲಿ SDPI ಮತ್ತು ನಗರದ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು.

- Advertisement -

ದೇಶದ ಸಾಂಪ್ರದಾಯಿಕ ಕೃಷಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾಯಿಸಿ, ಕಾರ್ಪೋರೇಟ್ ವಲಯಕ್ಕೆ ಕೃಷಿ ಕ್ಷೇತ್ರವನ್ನು  ವರ್ಗಾಯಿಸುವ ಹುನ್ನಾರದಿಂದ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ 3 ಕರಾಳ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಸೂಚಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI ) , ಹಾಸನ ಜಿಲ್ಲಾ ಘಟಕ ಮತ್ತು ವಿವಿಧ ಸಂಘಟನೆಗಳು ಇಂದು ನಗರದ ಹೇಮಾವತಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.

ಕಳೆದ 9 ತಿಂಗಳಿನಿಂದ, ದೆಹಲಿಯ ಗಡಿಯಲ್ಲಿ ಲಕ್ಷಾಂತರ ರೈತರು ಕೃಷಿ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಮುಷ್ಕರದಲ್ಲಿ ಈವರೆಗೆ 700 ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಮತ್ತು ಬೆಳೆಗಳಿಗೆ ಮೂಲ ಬೆಂಬಲ ಬೆಲೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ಸುಮಾರು 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿತ್ತು.

Join Whatsapp