‘ಭಾರತ್ ಜೋಡೋ’: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

Prasthutha|

ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್ ಜೋಡೋ ಯಾತ್ರೆ ಮತ್ತೆ ಆರಂಭವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು.

- Advertisement -


ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಕರ್ನಾಟಕದಲ್ಲಿ ನಡೆಯುತ್ತಿರುವ 5ನೇ ದಿನದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ಕೈ ನಾಯಕರು ಸೋನಿಯಾ ನೋಡಲು ಮುಗಿಬಿದ್ದಿದ್ದಾರೆ.

ಚೀಣ್ಯ ಗ್ರಾಮದಿಂದ ರಾಹುಲ್ ಗಾಂಧಿಯವರ ಜೊತೆಯಲ್ಲಿ ಹೆಜ್ಜೆ ಹಾಕಿದ ಸೋನಿಯಾ ಗಾಂಧಿಯವರು ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಚೆಲುವರಾಯಸ್ವಾಮಿ ಜೊತೆಯಾಗಿ ಕರಡಿಯಾ ವರೆಗೆ ನಡೆದುಬಂದರು.

- Advertisement -

ಪಾದಯಾತ್ರೆಯುದ್ದಕ್ಕೂ ಹಳ್ಳಿ ಹಳ್ಳಿಗಳಿಂದ ನೆರೆದಿದ್ದ ಜನರು, ಕಳಸ ಹೊತ್ತ ಮಹಿಳೆಯರು, ಮಕ್ಕಳು ಸೋನಿಯಾ ಗಾಂಧಿಯವರನ್ನು ಸ್ವಾಗತಿಸಿ ಅವರೊಂದಿಗೆ ಹೆಜ್ಜೆ ಹಾಕಿದರು.


ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಬೆಳಗ್ಗೆ ಪಾದಯಾತ್ರೆ ಶುರುವಾಗಿದೆ.

Join Whatsapp