ನಾಳೆ ರಾಜ್ಯಕ್ಕೆ ‘ಭಾರತ್ ಜೋಡೋ’ ಎಂಟ್ರಿ: ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಚಾಮರಾಜನಗರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಗುಂಡ್ಲುಪೇಟೆ ಮೂಲಕ ರಾಜ್ಯ ಪ್ರವೇಶಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್ ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಹರಿದುಹಾಕಿದ್ದಾರೆ.


ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ ಹೋಟೆಲ್ ನಿಂದ ಊಟಿ ರಸ್ತೆಯ ಉದ್ದಕ್ಕೂ ಅಳವಡಿಸಿದ್ದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿದ್ದಾರೆ.

- Advertisement -


ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಚಾಮರಾಜನಗರ ಶಾಸಕ ಸಿ ಪುಟ್ಟರಂಗಶೆಟ್ಟಿ ಭಾವಚಿತ್ರಗಳಿರುವ ಫ್ಲೆಕ್ಸ್ ಅನ್ನು ಹರಿದು ಹಾಕಲಾಗಿದೆ.

- Advertisement -