Home ಟಾಪ್ ಸುದ್ದಿಗಳು 100 ದಿನ ಯಶಸ್ವಿಯಾಗಿ ಪೂರೈಸಿದ ಭಾರತ್ ಜೋಡೋ ಯಾತ್ರೆ

100 ದಿನ ಯಶಸ್ವಿಯಾಗಿ ಪೂರೈಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಇಂದು ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ.

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಸಚಿನ್ ಪೈಲಟ್ ಹೆಜ್ಜೆ ಹಾಕಿದ್ದಾರೆ. ಅಲ್ಲದೆ, ಇತರ ಹಲವು ಬೇರೆ ರಾಜ್ಯಗಳ ಕಾಂಗ್ರೆಸ್ ನಾಯಕರು ಸಹ ಇಂದಿನ ನಡಿಗೆಯಲ್ಲಿ ಭಾಗವಹಿಸಿದರು.

ಭಾರತ್ ಜೋಡೋ ಯಾತ್ರೆ ಒಂದು ದೊಡ್ಡ ಸಾಧನೆಯಾಗಿದೆ. ಈ ಯಾತ್ರೆಯಿಂದ ಜನಸಾಮಾನ್ಯರ ಅದೆಷ್ಟೋ ಸಮಸ್ಯೆಗಳು ಬೆಳಕಿಗೆ ಬಂದಿವೆ. ಬಿಜೆಪಿಯವರು ಯಾತ್ರೆ ಒಡೆಯಲು ಮತ್ತು ರಾಹುಲ್ ಗಾಂಧಿಯವರ ಇಮೇಜ್ ಮುರಿಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಅದರಲ್ಲಿ ಸಫಲರಾಗಿಲ್ಲ, ಆಗುವುದೂ ಇಲ್ಲ.  ಜನವರಿ 26ರಿಂದ ಪಕ್ಷವು ಫಾಲೋ ಅಪ್ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ಯಾತ್ರೆಯ ಒಳಿತನ್ನು ಎಲ್ಲಡೆಗೆ ಹಂಚಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.

ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ, ಮಧ್ಯ ಪ್ರದೇಶ ದಾಟಿ ಈಗ ರಾಜಸ್ತಾನ ರಾಜ್ಯದಲ್ಲಿ ಮುನ್ನಡೆದಿದೆ.

Join Whatsapp
Exit mobile version