ಭಾರತ್ ಜೋಡೋ ಯಾತ್ರೆ: ಅಖಿಲೇಶ್ ಯಾದವ್, ಮಾಯಾವತಿಗೆ ಕಾಂಗ್ರೆಸ್ ಆಹ್ವಾನ!

Prasthutha|

ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಆರ್ ಎಲ್ ಡಿಯ ಜಯಂತ್ ಚೌಧರಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಹಲವಾರು ನಾಯಕರನ್ನು ಭಾರತ್ ಜೋಡೋ ಯಾತ್ರೆಯ ಉತ್ತರ ಪ್ರದೇಶ ಹಂತದಲ್ಲಿ ಭಾಗವಹಿಸಲು ಕಾಂಗ್ರೆಸ್ ಆಹ್ವಾನಿಸಿದೆ.

- Advertisement -

ಲಕ್ನೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾಗಿರುವ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಯಾತ್ರೆಗೆ ಆಹ್ವಾನಿಸಲಾಗಿದೆ. ಅಲ್ಲದೆ ವಿವಿಯ ಮತ್ತೊಬ್ಬ ಪ್ರಾಧ್ಯಾಪಕ ರವಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಗಾಜಿಯಾಬಾದ್ ನ ಲೋನಿ ಮೂಲಕ ಜನವರಿ 3 ರಂದು ಉತ್ತರ ಪ್ರದೇಶವನ್ನು ಪ್ರವೇಶಿಸಲಿದೆ. ನಂತರ ಇದು ಬಾಗ್ಪತ್ ಮತ್ತು ಶಾಮ್ಲಿ ಮೂಲಕ ಹರಿಯಾಣವನ್ನು ಪ್ರವೇಶಿಸುತ್ತದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಪಕ್ಷವು ಆಹ್ವಾನ ನೀಡಿದೆ ಎಂದು ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ತಿಳಿಸಿದ್ದಾರೆ. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿಸದ ಪ್ರಸ್ತುತ ಸಮಯದಲ್ಲಿ, ಜನರ ಮನಸ್ಸನ್ನು ತಿಳಿಯಲು ಈ ಯಾತ್ರೆಯು ಏಕೈಕ ಆಯ್ಕೆಯಾಗಿದೆ ಎಂದು ವಕ್ತಾರರು ಹೇಳಿದರು. ಕೇಂದ್ರ ಸರ್ಕಾರದ ಬಗ್ಗೆ ಇಡೀ ವಿರೋಧ ಪಕ್ಷಗಳು ಹೆಚ್ಚುಕಡಿಮೆ ಒಂದೇ ರೀತಿಯ ಅಭಿಪ್ರಾಯವನ್ನು ಹೊಂದಿವೆ, ಆದ್ದರಿಂದ ಅವರನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

Join Whatsapp