Home ಟಾಪ್ ಸುದ್ದಿಗಳು ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ರಾಷ್ಟ್ರ ರಾಜಧಾನಿ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಶನಿವಾರ ಬೆಳಿಗ್ಗೆ ಹರಿಯಾಣದ ಫರಿದಾಬಾದ್ನಿಂದ ಹೊರಟು ಬರದಾಪುರ್ (ಬರದಾಪುರ್ ಮೊಟ್ರೊ ನಿಲ್ದಾಣದ ಸಮೀಪ) ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಿತು.

ಈ ವೇಳೆ ರಾಹುಲ್ ಗಾಂಧಿ ಸೇರಿದಂತೆ ಜೋಡೊ ಯಾತ್ರೆಯ ಕಾರ್ಯಕರ್ತರನ್ನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌದರಿ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ಶಶಿಕಾಂತ್ ಗೋಹಿಲ್, ರಣದೀಪ್ ಸುರ್ಜೇವಾಲಾ ಉಪಸ್ಥಿತರಿದ್ದರು.

ಯಾತ್ರೆಯು 107 ದಿನ ಪೂರೈಸಿ ಇಂದು ದೆಹಲಿಗೆ ಆಗಮಿಸಿದ್ದು, ದೆಹಲಿಯಲ್ಲಿ ನಿಜಾಮುದ್ದಿನ್, ಇಂಡಿಯಾ ಗೇಟ್ ಸರ್ಕಲ್, ಐಟಿಒ, ದೆಹಲಿ ಕೌಂಟ್, ದರಿಯಾಗಂಜ್ ನಂತರ ಕೆಂಪು ಕೋಟೆಯತ್ತ ಯಾತ್ರೆಯು ಸಾಗಲಿದೆ. ಹೊಸ ವರ್ಷದ ಪ್ರಯುಕ್ತ ಯಾತ್ರೆಗೆ 9ದಿನ ವಿಶ್ರಾಂತಿ ನೀಡಲಾಗಿದ್ದು ಜನವರಿ 3ರಿಂದ ಪುನಃ ಪ್ರಾರಂಭವಾಗಲಿದೆ. ಬಳಿಕ ಹರಿಯಾಣಕ್ಕೆ ಹಿಂತಿರುಗಿ ಪಂಜಾಬ್ ಮೂಲಕ ಜಮ್ಮು ಮತ್ತು ಕಾಶ್ಮೀರದತ್ತ ಯಾತ್ರೆ ಸಾಗಲಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ಫೆಬ್ರವರಿ 2023 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

Join Whatsapp
Exit mobile version