ಭಾರತ್ ಜೋಡೋ ಯಾತ್ರೆ: ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

Prasthutha|

ಮಂಡ್ಯ: ಭಾರತ್ ಜೋಡೋ ಪಾದಯಾತ್ರೆ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

- Advertisement -


ವರದಿಗಾರರು, ಕ್ಯಾಮೆರಾಮ್ಯಾನ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.


ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

- Advertisement -


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.



Join Whatsapp