Home ಟಾಪ್ ಸುದ್ದಿಗಳು ಭಾರತ್ ಜೋಡೋ ಯಾತ್ರೆ: ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಭಾರತ್ ಜೋಡೋ ಯಾತ್ರೆ: ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಮಂಡ್ಯ: ಭಾರತ್ ಜೋಡೋ ಪಾದಯಾತ್ರೆ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.


ವರದಿಗಾರರು, ಕ್ಯಾಮೆರಾಮ್ಯಾನ್ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.


ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಪೊಲೀಸರ ಗೂಂಡಾವರ್ತನೆಗೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಹಲ್ಲೆ ವಿಚಾರ ತಿಳಿದಿಲ್ಲ. ಸಂಬಂಧಪಟ್ಟವರಿಂದ ವಿವರಗಳನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version