ಭಾರತ್ ಜೋಡೋ ಯಾತ್ರೆ: ಬಳ್ಳಾರಿಗೆ ಹರಿದು ಬರುತ್ತಿದೆ ಜನಸಾಗರ

Prasthutha|

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿರುವ ಬಹಿರಂಗ ಸಮಾವೇಶದ ಸ್ಥಳಕ್ಕೆ ಜನಸಾಗರವೇ ಹರಿದು ಬರುತ್ತಿದೆ.

- Advertisement -


ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ ಹಾಗೂ ಕಿತ್ತೂರು ಕರ್ನಾಟಕದ ವಿಜಯಪುರ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಕಾಂಗ್ರೆಸ್ ಕಾರ್ಯಕರ್ತರು ವಾಹನಗಳಲ್ಲಿ ಬಂದಿದ್ದಾರೆ.


ಬಳ್ಳಾರಿಯ ಎಲ್ಲ ರಸ್ತೆ, ವೃತ್ತ ಹಾಗೂ ಸಮಾವೇಶ ನಡೆಯುತ್ತಿರುವ ಮುನ್ಸಿಪಲ್ ಮೈದಾನದಲ್ಲಿ ನಾಯಕರ ಬೃಹತ್ ಕಟೌಟ್, ಬ್ಯಾನರ್, ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.

Join Whatsapp