Home ಟಾಪ್ ಸುದ್ದಿಗಳು ಭಾರತ್ ಜೋಡೋ ಯಾತ್ರೆ: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ

ಭಾರತ್ ಜೋಡೋ ಯಾತ್ರೆ: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗಾಗಿ ಸೋಮವಾರ ಮಧ್ಯಾಹ್ನ ಮೈಸೂರಿಗೆ ಆಗಮಿಸಿದರು.

ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋನಿಯಾ ಗಾಂಧಿಯವರನ್ನು ಬರಮಾಡಿಕೊಂಡರು.

ಎರಡು ದಿನಗಳ ವಿರಾಮದ ನಂತರ ಅ.6ರಂದು ಮಂಡ್ಯದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಅನಾರೋಗ್ಯದ ಕಾರಣದಿಂದಾಗಿ ಸೋನಿಯಾ ಗಾಂಧಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳ ಸಮಯದಲ್ಲಿ ಪಕ್ಷದ ಪರವಾಗಿ ಪ್ರಚಾರ ಮಾಡಿರಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವ ಪಕ್ಷದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಗಾಂಧಿ ಬಹಳ ಸಮಯದ ನಂತರ ಭಾಗವಹಿಸಲಿದ್ದಾರೆ

Join Whatsapp
Exit mobile version