ಶೀಘ್ರದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸಲಿದ್ದಾರೆ: ದಿಗ್ವಿಜಯ್‌ ಸಿಂಗ್‌

Prasthutha|

ಇಂಧೋರ್‌: ಶೀಘ್ರದಲ್ಲೇ ನರೇಂದ್ರ ಮೋದಿ ಅವರು ಮುಸ್ಲಿಮರ ಟೋಪಿ ದರಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್‌ ಹೇಳಿದ್ದಾರೆ.

- Advertisement -

ಇಂಧೋರ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ ಟೋಪಿಯನ್ನು ಧರಿಸಲಿದ್ದಾರೆ. ಭಾರತ್‌ ಜೋಡೊ ಯಾತ್ರೆಯು ಅವರಿಗೆ ಒತ್ತಡವನ್ನು ಸೃಷ್ಟಿಸುತ್ತಿದೆ ಎಂದರು.

ಭಾರತ್‌ ಜೋಡೊ ಯಾತ್ರೆ ಆರಂಭಗೊಂಡಾಗ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಮದರಸ ಮತ್ತು ಮಸೀದಿಗಳಿಗೆ ಭೇಟಿ ನೀಡಲು ಆರಂಭಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಪ್ರಧಾನಿ ಮೋದಿ ಅವರೂ ಟೋಪಿ ಧರಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

Join Whatsapp