ಭಾರತ್ ಜೋಡೋ ಯಾತ್ರೆ: ನಾಳೆ ಸಮಾರೋಪ

Prasthutha|

- Advertisement -

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕೊನೆಯ ದಿನಕ್ಕೆ ಕಾಲಿಟ್ಟಿದೆ.

ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 10:45 ಕ್ಕೆ ಯಾತ್ರೆಯನ್ನು ಪ್ರಾರಂಭಿಸಿದರು.

- Advertisement -

ತ್ರಿವರ್ಣ ಧ್ವಜ ಮತ್ತು ಪಕ್ಷದ ಧ್ವಜಗಳನ್ನು ಹಿಡಿದುಕೊಂಡಿದ್ದ ಮಹಿಳೆಯರು ಸೇರಿದಂತೆ ನೂರಾರು ಕಾಂಗ್ರೆಸ್ ಬೆಂಬಲಿಗರೊಂದಿಗೆ ಗಾಂಧಿಯವರು ಹೆಜ್ಜೆಹಾಕಿದರು.

ಭಾರತ್ ಜೋಡೋ ಯಾತ್ರೆಯು 2022 ಸೆ.7ರಂದು ಕನ್ಯಾಕುಮಾರಿಯಿಂದ ಆರಂಭಗೊಂಡು, ದೇಶದ 75 ಜಿಲ್ಲೆಗಳಲ್ಲಿ ಸಂಚರಿಸಿ, 4,080 ಕಿ.ಮೀ. ಕ್ರಮಿಸಿದೆ. ಇದು ಐತಿಹಾಸಿಕ ಪಾದಯಾತ್ರೆಯಾಗಿದೆ.

Join Whatsapp