ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಬುಲೆಟ್ ಸವಾರಿ

Prasthutha|


ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಬುಲೆಟ್ ಸವಾರಿ ಮೂಲಕ‌ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಆಕರ್ಷಿಸಿದ್ದಾರೆ.

- Advertisement -

ಮಧ್ಯಪ್ರದೇಶದ ಮೊವ್‍ ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು ರಾಯಲ್ ಎನ್‍ ಫೀಲ್ಡ್ ಬುಲೆಟ್ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.


ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಹುಲ್ ಗಾಂಧಿ ಬೈಕ್ ಮೇಲೆ ಬರುತ್ತಿದ್ದರೆ, ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಅವರನ್ನು ಹುರಿದುಂಬಿಸುತ್ತಿರುವುದನ್ನು ಹಾಗೂ ಹೋಗಲು ದಾರಿ ಮಾಡಿಕೊಡುತ್ತಿರುವುದನ್ನು ಕಾಣಬಹುದಾಗಿದೆ.

Join Whatsapp