ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

Prasthutha|

►ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಚ್‌’ಡಿಕೆ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರು ಪ್ರಮಾಣ ವಚನ ಬೋಧಿಸಿದರು. ನಂತರ ಸಂಸತ್‌ ಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದ ಸಂಸರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಎಚ್‌.ಡಿ. ಕುಮಾರಸ್ವಾಮಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.

ಅಧಿವೇಶನದ ಮೊದಲ ದಿನವಾದ ಸೋಮವಾರ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದು, ಮಂಗಳವಾರ 264 ಹೊಸದಾಗಿ ಚುನಾಯಿತರಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ.

- Advertisement -



Join Whatsapp