IPS ಸೇವೆಗೆ ಗುಡ್ ಬೈ ಹೇಳಿದ ಭಾಸ್ಕರ್ ರಾವ್ !

Prasthutha|

ಬೆಂಗಳೂರು: ರೈಲ್ವೆ ಪೊಲೀಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ)ರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್ ಅವರು ಐಪಿಎಸ್ ವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಸ್ವಯಂ ನಿವೃತ್ತಿ ಕೋರಿ 2021ರ ಸೆಪ್ಟೆಂಬರ್ 16ರಂದು ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು.

- Advertisement -

3 ತಿಂಗಳೊಳಗೆ ಗೃಹ ಸಚಿವಾಲಯ ಸಂಬಂಧಿಸಿದ ಅಧಿಕಾರಿಯನ್ನ ಸಂಪರ್ಕಿಸಬೇಕು. 6 ತಿಂಗಳುಗಳೇ ಕಳೆದರೂ ಗೃಹ ಸಚಿವಾಲಯದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16(2)ನಡಿ ಸೇವೆಗೆ ಗುಡ್ ಬೈ ಹೇಳಿದ್ದಾರೆ.

2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು.



Join Whatsapp