ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ನೀಡಲು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಭಟ್ಕಳ ಶಾಸಕ

Prasthutha|

ಬೆಂಗಳೂರು: ಭಟ್ಕಳ ಶಾಸಕ ಶ್ರೀ ಸುನಿಲ್ ನಾಯಕ್ ರವರು ಇಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ, ಇತಿಹಾಸ ಪ್ರಸಿದ್ದ ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ನೀಡಬೇಕು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮುರ್ಡೇಶ್ವರದ ದೇವಸ್ಥಾನದ ಆವರಣದಲ್ಲಿರುವ ಶಿವ ಪ್ರತಿಮೆ ದ್ವಂಸಗೊಳಿಸುವಂತೆ voice of Hind ಎಂಬ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಮನವಿ ಸಲ್ಲಿಸಿದರು.

- Advertisement -

ಮನವಿ ಸ್ವೀಕರಿಸಿದ ಸಚಿವರು, ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಗಂಭೀರ ಪ್ರಯತ್ನ ನಡೆಸಲಾಗಿದೆ ಎಂದು ತಿಳಿಸಿದರು.

‘ದಿ ವಾಯ್ಸ್ ಆಪ್ ಹಿಂದ್’ ಪತ್ರಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಶಿವನ ಮೂರ್ತಿಯ ಚಿತ್ರವನ್ನು ವಿರೂಪಗೊಳಿಸಿ ಪ್ರಕಟಿಸಲಾಗಿತ್ತು.



Join Whatsapp