ಭಟ್ಕಳ: ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಮಹಮ್ಮದ್ ಫಾಝಿಲ್ (16) ಮೃತ ಬಾಲಕ.
ಶಾಲಾ ಪ್ರವಾಸದ ನಿಮಿತ್ತ ಮುರ್ಡೇಶ್ವರಕ್ಕೆ ಬಂದಿದ್ದ ಫಾಝಿಲ್ ಗೆಳೆಯರ ಜೊತೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗಿದ್ದಾನೆ. ಒಂದು ಗಂಟೆಗಳ ಶೋಧ ಕಾರ್ಯದ ಬಳಿಕ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.