ಪುತ್ತೂರಿನ ಘಟನೆಗೆ ಭಟ್, ನಳಿನ್ ಕಾರಣ: ಅಭಯ್ ಚಂದ್ರ ಜೈನ್

Prasthutha|

ಬಿ.ಕೆ ಹರಿಪ್ರಸಾದ್ ಗೃಹ, ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ

- Advertisement -


ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ನಳಿನ್ ಕುಮಾರ್ ಕಟೀಲ್ ಕಾರಣ ಎಂದು ಮಾಜಿ ಸಚಿವ ಅಭಯ್ ಚಂದ್ರ ಜೈನ್ ಆರೋಪ ಮಾಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಗೆ ನೇರ ಕಾರಣ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ. ಸಿದ್ದರಾಮಯ್ಯ ನಾಳೆ ಅಧಿಕಾರ ಸ್ವೀಕಾರ ಮಾಡಬೇಕು. ಕಲ್ಲಡ್ಕ ಭಟ್ ಈ ಘಟನೆಗೆ ಕಾಂಗ್ರೆಸ್ ಕಾರಣ ಎಂದು ಹೇಳುತ್ತಾರೆ. ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದರೆ ಅವರಿಗೆ ಮಾನವೀಯತೆ ಇದ್ಯಾ ಎಂದು ಜೈನ್ ಪ್ರಶ್ನಿಸಿದರು.

- Advertisement -


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದೆ. ಹೀಗಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ಗೃಹ ಸಚಿವರನ್ನಾಗಿ ಮಾಡಬೇಕು. ಹಾಗೆಯೇ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿಯೂ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp