ಭವಾನಿ ರೇವಣ್ಣ ಬಿಜೆಪಿ ಸೇರ್ಪಡೆಯಾದರೆ ಸ್ವಾಗತ: ಸಚಿವ ಅಶ್ವಥ್ ನಾರಾಯಣ

Prasthutha|

- Advertisement -

ಮೈಸೂರು: ಬಿಜೆಪಿ ಪಕ್ಷದಲ್ಲಿ ಯಾರ ಮನೆಯನ್ನೂ ಕಾಯಬೇಕಿಲ್ಲ, ಯಾರ ಗೇಟನ್ನು ಕಾಯಬೇಕಿಲ್ಲ, ಬಿಜೆಪಿಯಲ್ಲಿ ಮುಕ್ತವಾಗಿ ಬೆಳೆಯುವ ಅವಕಾಶವಿದೆ. ಹೀಗಾಗಿ ಜೆಡಿಎಸ್​ ನ ಭವಾನಿ ರೇವಣ್ಣ ಅವರು ಬಿಜೆಪಿಗೆ ಬಂದರೆ ಹೃದಯಪೂರ್ವಕ ಸ್ವಾಗತ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದಿಂದ ಟಿಕೆಟ್ ಪಡೆಯಲು ಪಟ್ಟು ಹಿಡಿದಿದ್ದಾರೆ. ಆದರೆ ಎಚ್.ಡಿ.ಕುಮಾರಸ್ವಾಮಿ ಅವರು ಭವಾನಿ ಅವರಿಗೆ ಹಾಸನದಲ್ಲಿ ಕೊಡಲ್ಲ ಎಂದು ಹೇಳಿದ್ದಾರೆ. ಆದರೆ ಬಿಜೆಪಿ ನಾಯಕ ಸಿ.ಟಿ.ರವಿ ಅವರು ಭವಾನಿ ರೇವಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ ಎಂದಿದ್ದರು. ಈ ಹೇಳಿಕೆಯನ್ನು ಸಮರ್ಥಿಸಿಕೊಂಡು ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದಾರೆ.

- Advertisement -

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಕ್ಕೆ ಮೇಲಿಂದ ಮೇಲೆ ಬರುತ್ತಿದ್ದಾರೆ. ಈ ಬಗ್ಗೆ ಲೇವಡಿ ಮಾಡಿದ ವಿಪಕ್ಷಗಳಿಗೆ ಟಾಂಗ್ ಕೊಟ್ಟ ಸಚಿವರು, ಕಾಂಗ್ರೆಸ್​ನವರು ಖಾಲಿಯಾಗಿದ್ದಾರೆ, ಅವರಿಗೆ ಹೇಳಲು ಏನೂ ಇಲ್ಲ ಎಂದರು.

ಸುಖಾ ಸುಮ್ಮನೇ ಮಾತನಾಡುತ್ತಿದ್ದಾರೆ ಎಂದರು. ಅಲ್ಲದೇ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ವಿಪಕ್ಷಗಳ ಕ್ಯಾತೆ ಇದ್ದೇ ಇದೆ. ನಮ್ಮದು ಅಭಿವೃದ್ಧಿ ಪರ ಸರ್ಕಾರ, ಅದಕ್ಕೆ ಜನ ಬೆಂಬಲಿಸುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್​ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಜೆಡಿಎಸ್‌ಗೆ ಮತ ನೀಡಿದರೆ ಪ್ರಯೋಜನವಿಲ್ಲ ಎಂದು ಅಶ್ವಥ್ ನಾರಾಯಣ ಹೇಳಿದರು.



Join Whatsapp