ಭವಾನಿ ರೇವಣ್ಣ ಸ್ಪರ್ಧೆ ವಿಚಾರ: ದೇವೇಗೌಡರ ತೀರ್ಮಾನವೇ ಅಂತಿಮ ಎಂದ ಸೂರಜ್ ರೇವಣ್ಣ

Prasthutha|

ಹಾಸನ: ಭವಾನಿ ರೇವಣ್ಣ ಹಾಸನಕ್ಕೆ ಅನಿವಾರ್ಯ ಅಲ್ಲ, ಆದರೆ ಅವರು ಸೂಕ್ತ ಅಭ್ಯರ್ಥಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆ ಜೆಡಿಎಸ್’ನ ಭದ್ರಕೋಟೆ. 2018ರಲ್ಲಿ ಹಾಸನ ಕ್ಷೇತ್ರವನ್ನು ಕಳೆದುಕೊಂಡಿದ್ದೇವೆ. 2023ರಲ್ಲಿ ಮತ್ತೆ ಪಡೆದುಕೊಳ್ಳಬೇಕು ಎನ್ನುವುದೇ ನಮ್ಮ ಉದ್ದೇಶ ಎಂದರು.
ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದ ಸ್ಪರ್ಧಿಸುವಂತಹ ಅನಿವಾರ್ಯತೆ ಇಲ್ಲ’ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿಯವರು ಪಕ್ಷದ ಹಿರಿಯ ರಾಜಕಾರಣಿ. ನಾವು ಅವರ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿರುತ್ತಾರೆ. ನಮಗೂ ಅದಕ್ಕೂ ಸಂಬಂಧವಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಹಾಸನ ಜಿಲ್ಲೆಯ ಕುರಿತು ಎಚ್.ಡಿ. ರೇವಣ್ಣ ಹಾಗೂ ದೇವೇಗೌಡರು ಕುಳಿತುಕೊಂಡು ತೀರ್ಮಾನ ಕೈಗೊಳ್ಳುತ್ತಾರೆ. ದೇವೇಗೌಡರ ತೀರ್ಮಾನವೇ ಅಂತಿಮ. ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುವ ವಿಷಯವಲ್ಲ ಎಂದರು.