ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ.
ಕಿಡ್ನಾಪ್ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗಿದೆ. ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ಹೆಸರು ಉಲ್ಲೇಖವಾಗಿದ್ದು, ಎಫ್ ಐಆರ್ ದಾಖಲಾಗಿದೆ. ಈ ಸಂಬಂಧ ಎಸ್ ಐಟಿ ಎರಡು ಬಾರಿ ನೋಟಿಸ್ ಕೊಟ್ಟರೂ ಉತ್ತರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಇಂದು ಜಾಮೀನು ಅರ್ಜಿ ವಿಚಾರಣೆ ಸೆಷನ್ಸ್ ಕೋರ್ಟ್, ನಾಳೆ (ಬುಧವಾರ) ಬೆಳಗ್ಗೆ 11 ಗಂಟೆಗೆ ಮುಂದೂಡಿದೆ.